ಹೆಣ್ಣುಮಗುವಿಗೆ ಜನ್ಮ ನೀಡಿದ ನಟಿ ದೀಪಿಕಾ ಪಡುಕೋಣೆ

public wpadmin

ಮುಂಬೈ: ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣ್ವೀರ್ ಸಿಂಗ್ ಹೆಣ್ಣು ಮಗುವಿನ ಪೋಷಕರಾಗಿದ್ದಾರೆ.

ದೀಪಿಕಾ ಭಾನುವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ನಿನ್ನೆಯಷ್ಟೇ ದೀಪಿಕಾ ಪಡುಕೋಣೆ ಮುಂಬೈನ ಅಂಬಾನಿ ಮಾಲೀಕತ್ವದ ಹೆಚ್‌ಎನ್‌ ರಿಲಯನ್ಸ್‌ ಆಸ್ಪತ್ರೆಗೆ ದಾಖಲಾಗಿದ್ದರು.

ಸೆಪ್ಟೆಂಬರ್ 28ರಂದು ದೀಪಿಕಾಗೆ ಡೆಲಿವರಿ ಡೇಟ್ ಇತ್ತು. ಆದರೆ ನಿಗದಿಗಿಂತ 20 ದಿನ ಮೊದಲೇ ದೀಪಿಕಾ ರಣ್ವೀರ್ ಮನೆಗೆ ಗೌರಿಯ ಆಗಮನವಾಗಿದೆ. ಒಂದು ದಿನದ ಹಿಂದಷ್ಟೇ ದೀಪಿಕಾ ಪಡುಕೋಣೆ ತಮ್ಮ ಪತಿ ರಣ್ವೀರ್ ಸಿಂಗ್ ಹಾಗೂ ಕುಟುಂಬದವರ ಜತೆಗೆ ಮುಂಬೈನ ಸಿದ್ಧಿವಿನಾಯಕ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು.
ಆದರೆ ಈ ಖುಷಿಯ ವಿಚಾರವನ್ನು ಇವರಿಬ್ಬರೂ ಕೂಡ ಸಾಮಾಜಿಕ ಜಾಲತಾಣದಲ್ಲಿ ಎಲ್ಲಿಯೂ ಪೋಸ್ಟ್ ಮಾಡಿಲ್ಲ, ಕೆಲ ದಿನಗಳ ಹಿಂದಷ್ಟೇ ದೀಪಿಕಾ ಪಡುಕೋಣೆ ಹಾಗೂ ರಣ್ವೀರ್ ಸಿಂಗ್ ಅವರು ಜೊತೆಯಾಗಿ ಪ್ರಗ್ನೆನ್ಸಿ ಫೋಟೋ ಶೂಟ್ ಮಾಡಿಸಿಕೊಂಡಿದ್ದರು. ದೀಪಿಕಾ ಪಡುಕೋಣೆ ಗರ್ಭಿಣಿಯಾದಾಗಿನಿಂದಲೂ ವ್ಯಾಪಕ ಟೀಕೆಗೆ ಗುರಿಯಾಗಿದ್ದರು.

ಈ ಮೊದಲು ದೀಪಿಕಾ ಪಡುಕೋಣೆಗೆ ವೈದ್ಯರು ಸೆಪ್ಟೆಂಬರ್ 28ರಂದು ಹೆರಿಗೆ ದಿನಾಂಕ ನೀಡಿದ್ದರು. ಆದರೆ ಅದೇ ದಿನ ಬಾಲಿವುಡ್ ಮತ್ತೊಬ್ಬ ನಟ ದೀಪಿಕಾ ಮಾಜಿ ಗೆಳೆಯ ರಣ್‌ಬೀರ್ ಕಪೂರ್ ಬರ್ತ್‌ಡೇ ಇತ್ತು. ಇದೇ ದಿನ ದೀಪಿಕಾ ಮಗುವಿಗೆ ಜನ್ಮ ನೀಡಲಿದ್ದಾರೆ ಎಂಬುದು ಸಾಕಷ್ಟು ಸುದ್ದಿಯಾಗಿತ್ತು.
ದೀಪಿಕಾ ಪಡುಕೋಣೆ ಹಾಗೂ ರಣ್ವೀರ್ ಸಿಂಗ್ ಫೆಬ್ರವರಿಯಲ್ಲಿ ಪ್ರಗ್ನೆನ್ಸಿ ವಿಚಾರವನ್ನು ಘೋಷಣೆ ಮಾಡಿದ್ದರು. 2018ರಲ್ಲಿ ದೀಪಿಕಾ ಪಡುಕೋಣೆ ಹಾಗೂ ರಣ್ವೀರ್ ಸಿಂಗ್ ಅವರು ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು.

Share This Article
Leave a comment