‘ಕಲ್ಕಿ 2898 ಎಡಿ’ 2898 ADಚಿತ್ರದ ಸಕ್ಸಸ್ ನಂತರ ‘ದಿ ರಾಜಾ ಸಾಬ್’ ಸಿನಿಮಾ ಮೂಲಕ ಪ್ರಭಾಸ್ ಗಮನ ಸೆಳೆಯುತ್ತಿದ್ದಾರೆ. ಇಂದು (ಅ.23) ನಟನ ಹುಟ್ಟುಹಬ್ಬದಂದೇ ಫ್ಯಾನ್ಸ್‌ಗೆ ಚಿತ್ರತಂಡ ಸರ್ಪ್ರೈಸ್ ಕೊಟ್ಟಿದೆ. ಪ್ರಭಾಸ್ ಎಂದೂ ಕಾಣಿಸಿಕೊಂಡಿರದ ಡಿಫರೆಂಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ‘ದಿ ರಾಜಾ ಸಾಬ್’ ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ.
ಪ್ರಭಾಸ್ ಹುಟ್ಟುಹಬ್ಬದ ದಿನವೇ ಮುಂದಿನ ಸಿನಿಮಾದ ಕ್ರೇಜಿ ಅಪ್‌ಡೇಟ್‌ವೊಂದು ಸಿಕ್ಕಿದೆ. ‘ದಿ ರಾಜಾ ಸಾಬ್’ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು, ಸಿಗಾರ್ ಬಾಯಲ್ಲಿ ಇಟ್ಟುಕೊಂಡು ರಾಯಲ್ ಆಗಿ ಪ್ರಭಾಸ್ ಪೋಸ್ ಕೊಟ್ಟಿದ್ದಾರೆ. ನಟನ ಖಡಕ್ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಮುಂದಿನ ವರ್ಷ ಏಪ್ರಿಲ್ 10ಕ್ಕೆ ಸಿನಿಮಾ ರಿಲೀಸ್ ಆಗಲಿದೆ.
ಇನ್ನೂ ಇತ್ತೀಚೆಗೆ ‘ದಿ ರಾಜಾ ಸಾಬ್’ ಸಿನಿಮಾ ಮೊದಲ ಪೋಸ್ಟರ್ ರಿಲೀಸ್ ಮಾಡಲಾಗಿತ್ತು. ಅದರಲ್ಲಿ ಪ್ರಭಾಸ್ ಲವರ್ ಬಾಯ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದರು. ಈಗ ಬಿಟ್ಟಿರುವ ಪೋಸ್ಟರ್‌ನಲ್ಲಿ ನಟ ಖಡಕ್ ಆಗಿ ಕಾಣಿಸಿಕೊಂಡಿರೋದು ಫ್ಯಾನ್ಸ್‌ಗೆ ಚಿತ್ರದ ಕುರಿತು ಕುತೂಹಲ ಮೂಡಿಸಿದೆ.