3 ತಿಂಗಳಲ್ಲಿ 3 ಬಾರಿ ಉಕ್ರೇನ್ ಅಧ್ಯಕ್ಷ ಜೊತೆ ಮೋದಿ ಮಾತುಕತೆ

public wpadmin

ನ್ಯೂಯಾರ್ಕ್: ವಿಶ್ವಸಂಸ್ಥೆ ಶೃಂಗಸಭೆಯ ವೇಳೆಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ ಸ್ಕಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಉಕ್ರೇನ್ ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಆದಷ್ಟು ಬೇಗನೇ ಇತ್ಯರ್ಥಗೊಳಿಸಲು , ಪ್ರದೇಶದಲ್ಲಿ ಶಾಂತಿ ನೆಲೆಸಲು ಮತ್ತು ಸ್ಥಿರತೆ ಕಾಪಾಡಲು ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ
ಕಳೆದ ಮೂರು ತಿಂಗಳ ಅವಧಿಯಲ್ಲಿ ಮೂರನೇ ಭೇಟಿಯಾಗಿದೆ. ಆಗಸ್ಟ್ 23 ರಂದು ಉಕ್ರೇನ್ ಭೇಟಿ ವೇಳೆ ಕೀವ್ ನಲ್ಲಿ, ಜೂನ್ ನಲ್ಲಿ ಇಟಲಿಯಲ್ಲಿ ನಡೆದ ಜಿ-7 ಶೃಂಗಸಭೆಯಲ್ಲಿ ಮೋದಿ ಹಾಗೂ ಝೆಲೆನ್ ಸ್ಕಿ ಮಾತುಕತೆ ನಡೆಸಿದ್ದರು. ಇದೀಗ ನ್ಯೂಯಾರ್ಕ್ ನಲ್ಲಿ ನಡೆದ ವಿಶ್ವಸಂಸ್ಥೆಯ ಭವಿಷ್ಯದ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿ, ಝೆಲೆನ್ ಸ್ಕಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

Share This Article
Leave a comment