3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕನಿಗೆ ಗಲ್ಲುಶಿಕ್ಷೆ

public wpadmin

ಬೆಳಗಾವಿ: ಮೂರು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಎರಗಿದ್ದ ಕಾಮುಕನಿಗೆ ಗಲ್ಲುಶಿಕ್ಷೆ ಪ್ರಕಟವಾಗಿದೆ.
2017ರಲ್ಲಿ ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಉದ್ದಪ್ಪ ರಾಮಪ್ಪ ಗಾಣಿಗೇರ(32) ಎಂಬ ವ್ಯಕ್ತಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಸದ್ಯ ಈ ಪ್ರಕರಣ ಸಂಬಂಧ ಕೂಲಂಕುಷವಾಗಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಅಪರಾಧಿಗೆ ಗಲ್ಲು ಶಿಕ್ಷೆ ಮತ್ತು 45 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಬೆಳಗಾವಿಯ ಪೋಕ್ಸೋ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಅಪ್ರಾಪ್ತ ಬಾಲಕಿಯ ಮೇಲೆ ಎರಗಿದ್ದ ಕಾಮುಕನಿಗೆ ಗಲ್ಲುಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿದೆ.

ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಬಾಲಕಿ ಪೋಷಕರಿಗೆ 3 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶ ನೀಡಿದೆ. ಈ ಘಟನೆ ಸಂಬಂಧ ಹಾರೂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a comment