ಬೆಂಗಳೂರು: ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರೂ. 50 ಕೋಟಿ ಬೇಡಿಕೆ ಹಾಗೂ ಜೀವ ಬೆದರಿಕೆ ಆರೋಪದಲ್ಲಿ ಅವರ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಉದ್ಯಮಿ ವಿಜಯ್ ತಾತ ದಾಖಲಿಸಿದ್ದ ದೂರಿನ ಆಧಾರದ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ. ವ್ಯವಹಾರಿಕವಾಗಿ ತಾವು ಮುನ್ನಡೆ ಸಾಧಿಸಿದ್ದು, ತಮಗೆ ಕೇಂದ್ರ ಸಚಿವರು ಬೆದರಿಕೆ ಹಾಕಿದ್ದಾರೆ. ತಮಗೆ 50 ಕೋಟಿ ರೂ. ನೀಡಬೇಕೆಂದು ಒತ್ತಡ ಹಾಕುತ್ತಿದ್ದಾರೆ. ಅದೇ ಹಣಕ್ಕಾಗಿ ಜೀವ ಬೆದರಿಕೆಯನ್ನೂ ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಅಲ್ಲದೇ, ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಅವರ ಹೆಸರನ್ನೂ ಉಲ್ಲೇಖಿಸಿರುವ ಉದ್ಯಮಿ ವಿಜಯ್ ತಾತಾ, ರಮೇಶ್ ಗೌಡ ಅವರೂ ಕೂಡ ತಮ್ಮಿಂದ ಹಣ ಕೀಳಲು ಪ್ರಯತ್ನಿಸಿದ್ದಾರೆ.