ಇನ್ನೆರಡು ದಿನಗಳಲ್ಲಿ ರಾಜೀನಾಮೆ: ದೆಹಲಿ ಸಿಎಂ ಕೇಜ್ರಿವಾಲ್ ಘೋಷಣೆ

public wpadmin

ನವದೆಹಲಿ: ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ ಆರೋಪ ಪ್ರಕರಣದಲ್ಲಿ ಇಡಿ, ಸಿಬಿಐ ಬಂಧನದ ಬಳಿಕ ಜಾಮೀನಿನ ಮೇಲೆ ಹೊರಬಂದಿರುವ ಅರವಿಂದ್ ಕೇಜ್ರಿವಾಲ್, ದೆಹಲಿಯ ಆಪ್ ಕಚೇರಿಯಲ್ಲಿ ಈ ಘೋಷಣೆ ಮಾಡಿದ್ದಾರೆ.

ಇನ್ನೆರಡು ದಿನಗಳಲ್ಲಿ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಜನರ ಬಳಿ ಹೋಗಿ ಮತ್ತೆ ಜನಾಶಿರ್ವಾದ ಪಡೆದು ಅಧಿಕಾರಕ್ಕೆ ಬರುತ್ತೇನೆ. ಕೇಜ್ರಿವಾಲ್ ಪ್ರಾಮಾಣಿಕವಾಗಿದ್ದರೆ ಮತ್ತೆ ಆಪ್‌ಗೆ ಮತ ಹಾಕಿ ಎಂದು ಹೇಳಿದ್ದಾರೆ.

ಆರೋಪಗಳನ್ನು ಹೊತ್ತು ಸಿಎಂ ಸ್ಥಾನದಲ್ಲಿ ಮುಂದುವರಿಯಲಾರೆ. ನಾನು ಪ್ರಾಮಾಣಿಕವಾಗಿದ್ದರೆ ಮಾತ್ರ ನನಗೆ ಆಶಿರ್ವಾದ ಮಾಡಿ ಎಂದು ಕೋರಿದ್ದಾರೆ.

Share This Article
Leave a comment