ಲಡ್ಡು ವಿವಾದ; ತನಿಖೆ ನಡೆಸಲು 9 ಸದಸ್ಯರ ತಂಡ ರಚಿಸಿದ ಆಂಧ್ರ

public wpadmin

ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ತನಿಕೆ ನಡೆಸಲು ಆಂಧ್ರಪ್ರದೇಶ ಸರ್ಕಾರವು 9 ಸದಸ್ಯರ ತಂಡವನ್ನು ರಚಿಸಿದೆ.
ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಇತರರ ವಿರುದ್ಧ ಹೈದರಾಬಾದ್‌ನಲ್ಲಿ ದೂರು ದಾಖಲಿಸಲಾಗಿದೆ.

ಗುಂಟೂರು ರೇಂಜ್ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಸರ್ವಶ್ರೇಷ್ಠ ತ್ರಿಪಾಠಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ತಿರುಮಲದಲ್ಲಿ ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಆಡಳಿತಾವಧಿಯಲ್ಲಿ ನಡೆದಿರುವ ಇತರ ಅಕ್ರಮಗಳ ಬಗ್ಗೆಯೂ ಎಸ್‌ಐಟಿ ತನಿಖೆ ನಡೆಸಲಿದೆ.

Share This Article
Leave a comment