ಹಿಂದುಗಳ ಹೆಸರಲ್ಲಿ ಪಾಕಿಸ್ತಾನಿಯರ ವಾಸ: ದಾವಣಗೆರೆಯಲ್ಲಿ ನಾಲ್ವರ ಬಂಧನ

public wpadmin

ಬೆಂಗಳೂರು: ನಗರದಲ್ಲಿ ಅಡಗಿದ್ದ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ್ದ ಪೊಲೀಸರು ಇದೀಗ ದಾವಣೆಗೆರೆಯಲ್ಲಿ ವಾಸವಿದ್ದ ನಾಲ್ವರು ಪಾಕಿಸ್ತಾನಿ ಪ್ರಜೆಗಳನ್ನೂ ಬಂಧಿಸಿದ್ದಾರೆ.

ಇದರಿಂದ ರಾಜ್ಯದ ಹಲೆವೆಡೆ ಪಾಕಿಸ್ತಾನಿ ಪ್ರಜೆಗಳು ಅವಿತಿರುವ ಆಘಾತಕಾರಿ ವಿಷಯ ಮುನ್ನೆಲೆಗೆ ಬಂದಿದೆ.

ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನದ ಪ್ರಜೆಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಿದ್ದಿಕಿ ಮೊಹಮ್ಮದ್ ಯಾಸಿನ್ (ಮಗ), ಜೈನಾಬಿ ನೂರ್ (ಸೊಸೆ), ಫಾತಿಮಾ (ಮಗಳು), ಅಲ್ತಾಫ್ ಬಂಧಿತ ಆರೋಪಿಗಳಾಗಿದ್ದು, ಅಲ್ತಾಫ್ ಪತ್ನಿ ಫಾತಿಮಾ ಪಾಕಿಸ್ತಾನ ಪ್ರಜೆಯಾಗಿದ್ದಾಳೆ.

ದಾವಣಗೆಯಲ್ಲಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನದ ಮಹಿಳೆ ನಕಲಿ ದಾಖಲೆ ಸೃಷ್ಟಿಸಿ ಹಿಂದೂಗಳ ಹೆಸರಿನಲ್ಲಿ ವಾಸವಾಗಿದ್ದರು. ಪಾಕಿಸ್ತಾನ ಮೂಲದ ಮಹಿಳೆ ಫಾತಿಮಾ ದಾವಣಗೆರೆಯ ಅಲ್ತಾಫ್ ನನ್ನು ವಿವಾಹವಾಗಿದ್ದಳು.

ಮೊಹಮ್ಮದ್ ಹನೀಫ್ ಕೂಡ ಪಾಕಿಸ್ತಾನದವನಾಗಿದ್ದಾನೆ. ಹನೀಫ್ ಸೊಸೆ, ಮಗಳು, ಅಳಿಯನನ್ನೂ ಬಂಧಿಸಲಾಗಿದೆ. ರಶೀದ್ ಅಲಿ ಸಿದ್ದಿಕಿ ಎಂಬಾತನ ಮಾವ ಮೊಹಮ್ಮದ್ ಹನೀಫ್ ಬೆಂಗಳೂರಿನಲ್ಲಿ ಸೆರೆ ಸಿಕ್ಕಿರುವ ಪ್ರಮುಖ ಆರೋಪಿ.

ದೆಹಲಿ, ಚೆನ್ನೈ ಬೆಳಗಾವಿ, ಮುಂಬೈ ಸೇರಿ ಹಲವೆಡೆ ತೆರಳಿ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಪಾಕಿಸ್ತಾನ ಪ್ರಜೆಗಳಿಗೆ ನಕಲಿ ಆಧಾರ್ ಮಾಡಿಕೊಟ್ಟವರು ಯಾರು ಎಂಬ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಬೆಂಗಳೂರಿನ ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆಗಳು ಬಂಧನವಾಗಿರುವ ಸಂಬಂಧ ಹೆಚ್ಚಿನ ತನಿಖೆಗಾಗಿ ಡಿವೈಎಸ್ಪಿ ಮೋಹನ್‌ಕುಮಾರ್ ನೇತೃತ್ವದಲ್ಲಿ 4 ತಂಡಗಳನ್ನು ರಚಿಸಲಾಗಿದೆ.

Share This Article
Leave a comment