‘ಮುಂಗಾರು ಮಳೆ’ ನಟಿ ಪೂಜಾ ಗಾಂಧಿ ಅವರು ಪತಿ ವಿಜಯ್ ಜೊತೆ ಲಂಡನ್‌ನಲ್ಲಿರುವ ಬಸವೇಶ್ವರ ಪುತ್ಥಳಿಯ ಆಶೀರ್ವಾದವನ್ನು ಪಡೆದಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಬಸವೇಶ್ವರ ಪುತ್ಥಳಿಗೆ ಪೂಜಾ ಗಾಂಧಿ ದಂಪತಿ ನಮನ ಸಲ್ಲಿಸಿದ್ದಾರೆ.
ಮದುವೆಯಾದ ಬಳಿಕ ಪತಿ ಜೊತೆ ಪೂಜಾ ಗಾಂಧಿ ಲಂಡನ್‌ಗೆ ಹಾರಿದ್ದಾರೆ. ಅಲ್ಲಿ ಲಂಡನ್‌ನಲ್ಲಿರುವ 2 ಪ್ರಮುಖ ಕನ್ನಡ ಸಂಸ್ಥೆಗಳಾದ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಮತ್ತು ಬಸವ ಸಮಿತಿ ಜಂಟಿಯಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಈ ಸಂದರ್ಭದಲ್ಲಿ, ಪೂಜಾ ಗಾಂಧಿ ಅವರು ಬಸವೇಶ್ವರ ಪುತ್ಥಳಿಗೆ ಗೌರವ ಸಲ್ಲಿಸಿದರು.