‘ಬಿಗ್ ಬಾಸ್’ ಬೆಡಗಿ ನಿವೇದಿತಾ ಗೌಡ ಅವರು ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಡಿವೋರ್ಸ್ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟೀವ್ ಆಗಿರುವ ನಟಿ ಈಗ ಬೆಡ್‌ರೂಮ್ ಫೋಟೋಶೂಟ್‌ವೊಂದನ್ನು ಶೇರ್ ಮಾಡಿದ್ದಾರೆ.
ಕೇಸರಿ ಬಣ್ಣದ ಲೆಹೆಂಗಾ ಧರಿಸಿರುವ ಕೆಲ ಫೋಟೋಗಳನ್ನು ನಟಿ ಶೇರ್ ಮಾಡಿದ್ದಾರೆ. ಬೆಡ್ ಮೇಲೆ ಕುಳಿತು ವಿವಿಧ ಭಂಗಿಯಲ್ಲಿ ನಟಿ ಪೋಸ್ ನೀಡಿದ್ದಾರೆ. ಎದೆಯ ಸೀಳು ಕಾಣುವಂತೆ ಬೋಲ್ಡ್ ಆಗಿ ಪೋಸ್ ಕೊಟ್ಟಿರುವ ನಿವೇದಿತಾ ಲುಕ್‌ಗೆ ಬಗೆ ಬಗೆಯ ಕಾಮೆಂಟ್ ಜೊತೆಗೆ ಸಿಕ್ಕಾಪಟ್ಟೆ ಟ್ರೋಲ್ ಆಗ್ತಿದೆ.
ನಿಮಗೆ ಡಿವೋರ್ಸ್ ಆಗಿದೆ ಅನ್ನೋದು ನೆನಪಿದ್ಯಾ? ಎಂದೆಲ್ಲಾ ನಟಿಗೆ ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಆದರೆ ಈ ಯಾವ ಕಾಮೆಂಟ್‌ಗಳಿಗೂ ತಲೆಕೆಡಿಸಿಕೊಳ್ಳದೇ ನಟಿ ಸೈಲೆಂಟ್ ಆಗಿದ್ದಾರೆ.
ಇನ್ನೂ ಚಂದನ್ ಶೆಟ್ಟಿ ಜೊತೆ ‘ಮುದ್ದು ರಾಕ್ಷಸಿ’ ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ. ಇದರ ರಿಲೀಸ್‌ಗೆ ನಟಿ ಎದುರು ನೋಡ್ತಿದ್ದಾರೆ. ಸೃಜನ್ ಲೋಕೇಶ್ ನಟನೆಯ ‘ಜಿಎಸ್‌ಟಿ’ ಸಿನಿಮಾದಲ್ಲಿ ನಿವೇದಿತಾ ನಟಿಸಿದ್ದಾರೆ.