ಬೆಂಗಳೂರು: ಮಧ್ಯಂತರ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಆಚೆ ಬಂದಿರುವ ದರ್ಶನ್ಗೆ ಬೆನ್ನು ನೋವಿನ ಸಮಸ್ಯೆ ಉಲ್ಬಣಿಸಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದರ್ಶನ್, ಇದೀಗ ಸರ್ಜರಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಿಜಿಎಸ್ ಆಸ್ಪತ್ರೆಯಲ್ಲಿ ಸರ್ಜರಿಗೆ ದರ್ಶನ್ ಅನುಮತಿ ನೀಡಿದ್ದಾರೆ. ಈ ಸಂಬಂಧ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ಜೊತೆ ವೈದ್ಯರು ಚರ್ಚೆ ನಡೆಸಿದ್ದಾರೆ. ಪಿಜಿಯೋಥೆರಪಿ (Physiotherapy) ಜೊತೆ ಶಸ್ತ್ರ ಚಿಕಿತ್ಸೆಯ ಅಗತ್ಯ ಇದೆ. ಕೇವಲ ಪಿಜಿಯೋಥೆರಪಿಯಿಂದ ಬೆನ್ನು ನೋವು ಗುಣಮುಖ ಸಾಧ್ಯವಿಲ್ಲ ಎಂದು ವೈದ್ಯ ಡಾ.ನವೀನ್ ಅಪ್ಪಾಜಿಗೌಡ ಅವರು ದರ್ಶನ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.
ಬಿಜಿಎಸ್ ಆಸ್ಪತ್ರೆ ವೈದ್ಯರ ತಂಡದ ಮನವರಿಕೆ ಬೆನ್ನಲ್ಲೇ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮೀ ಸರ್ಜರಿಗೆ ಅನುಮತಿ ನೀಡಿದ್ದಾರೆ ಎಂದು ಹೇಳಲಾಗಿದೆ. ಅಂತೆಯೇ ದರ್ಶನ್ಗೆ ಸರ್ಜರಿ ಮಾಡಲು ಬಿಜಿಎಸ್ ವೈದ್ಯರ ತಂಡ ಸಿದ್ಧತೆ ನಡೆಸುತ್ತಿದೆ.