ರೆಬೆಲ್ ಸ್ಟಾರ್ ಮನೆಯಲ್ಲಿ ಸಂಭ್ರಮ – ಮುದ್ದಾದ ಗಂಡು ಮಗುವಿಗೆ ಜನ್ಮ ಕೊಟ್ಟ ಅವಿವಾ

public wpadmin

ಅಭಿಷೇಕ್ ಅಂಬರೀಶ್ ಪತ್ನಿ ಅವಿವಾ ಮಂಗಳವಾರ ಮುಂಜಾನೆ 8:30ರ ಸುಮಾರಿಗೆ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದು. ತಾಯಿ ಮಗು ಇಬ್ಬರೂ ಕೂಡ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚೆಗಷ್ಟೇ ಅದ್ಧೂರಿಯಾಗಿ ಸೀಮಂತ ಕಾರ್ಯವನ್ನು ಮಾಡಿಸಿಕೊಂಡಿದ್ದ ಆವಿವಾ ಅಭಿಷೇಕ್ ಸದ್ಯದಲ್ಲಿಯೇ ಹೊಸ ಅತಿಥಿ ಬರಲಿದ್ದಾನೆ ಎಂಬ ಸಿಹಿ ಸುದ್ದಿಯನ್ನು ಕೊಟ್ಟಿದ್ದರು. ಈಗ ಅವಿವಾ ಗಂಡು ಮಗುವಿಗೆ ಜನ್ಮ ನೀಡಿದ್ದು. ಮಂಡ್ಯದ ಗಂಡು ಅಂಬರೀಶ್ ಮತ್ತೆ ಹುಟ್ಟಿ ಬಂದಿದ್ದಾರೆ ಎಂದು ಅವರ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ.‌

ಅಭಿಷೇಕ್ ಮತ್ತು ಅವಿವಾ ಅವರ ಮದುವೆಯು ಕಳೆದ ವರ್ಷ ಜೂ.5ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆದಿತ್ತು.




Share This Article
Leave a comment