ಬೆಂಗಳೂರು: ಉಪಚುನಾವಣೆಯಲ್ಲಿ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಮೂರು ಕ್ಷೇತ್ರಗಳಲ್ಲೂ ಜನರು ‘ಕೈ’ ಹಿಡಿದಿದ್ದಾರೆ. ಜನ ಬೆಂಬಲಕ್ಕೆ ಕಾಂಗ್ರೆಸ್ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್, ಅಭಿವೃದ್ಧಿಗೆ ಒಲವು, ಗ್ಯಾರಂಟಿಗೆ ಗೆಲುವು ಎಂದು ಅಭಿಪ್ರಾಯಪಟ್ಟಿದೆ.
ಸಂಡೂರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದಾರೆ. ಇತ್ತ ಚನ್ನಪಟ್ಟಣದಲ್ಲಿ ‘ಕೈ’ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭಾರೀ ಮುನ್ನಡೆ ಕಾಯ್ದುಕೊಂಡಿದ್ದು, ಗೆಲುವಿಗೆ ಸನಿಹವಿದ್ದಾರೆ. ಶಿಗ್ಗಾಂವಿಯಲ್ಲೂ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆಲುವು ಸಾಧಿಸಿದ್ದಾರೆ.