BBK 11:’ಬಿಗ್‌ ಬಾಸ್‌’ಗೆ ನೀವು ನೀಡಿರುವ ಕೊಡುಗೆಯ ಬಗ್ಗೆ ಹೆಮ್ಮೆಯಿದೆ: ಸಾನ್ವಿ ಸುದೀಪ್‌

public wpadmin

‘ಬಿಗ್ ಬಾಸ್ ಕನ್ನಡ 11’ರ ಬಳಿಕ ಕಿಚ್ಚ ಸುದೀಪ್ ನಿರೂಪಣೆ ಮಾಡಲ್ಲ ಅಂತ ವಿದಾಯ ಘೋಷಿಸಿದ್ದಾರೆ. ಸುದೀಪ್ ಈ ನಿರ್ಧಾರ ಇದೀಗ ಅಭಿಮಾನಿಗಳ ಪಾಲಿಗೆ ನುಂಗಲಾರದ ತುತ್ತಾಗಿದೆ. ಹೀಗಿರುವಾಗ ತಂದೆಯ ನಿರ್ಧಾರದ ಬಗ್ಗೆ ಪುತ್ರಿ ಸಾನ್ವಿ ಸುದೀಪ್ ರಿಯಾಕ್ಷನ್ ಕೊಟ್ಟಿದ್ದಾರೆ.

ಅಪ್ಪ ನಿಮ್ಮ ಬಿಗ್ ಬಾಸ್ ಜರ್ನಿ ಅತ್ಯಂತ ಹೆಮ್ಮೆ ಪಡುವಂತದ್ದು, ಬೇರೆ ಯಾರು ನಿಮ್ಮ ರೀತಿ ಮಾಡಲು ಸಾಧ್ಯವಿಲ್ಲ. ಬಿಗ್ ಬಾಸ್ ವೇದಿಕೆ ಮೇಲೆ ನಿಮ್ಮನ್ನು ನಾವು ನೋಡಲು ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಆದರೆ ಬಿಗ್ ಬಾಸ್ ಜರ್ನಿಯಲ್ಲಿ ನಿಮ್ಮನ್ನು ನೋಡಿದ್ದು ನನಗೆ ಅತ್ಯಂತ ಸಂತೋಷವನ್ನು ತಂದಿದೆ. ‘ಬಿಗ್ ಬಾಸ್’ ಶೋಗಾಗಿ ನೀವು ಹಾಕಿದ ಶ್ರಮಕ್ಕೆ ಸರಿಸಾಟಿಯೇ ಇಲ್ಲ. ಇಲ್ಲಿವರೆಗೂ ಬಿಗ್ ಬಾಸ್ ಶೋಗೆ ನೀವು ನೀಡಿರುವ ಕೊಡುಗೆಗೆ ನಾನು ಹೆಮ್ಮೆ ಪಡುತ್ತೇನೆ ಎಂದು ಸಾನ್ವಿ ಸುದೀಪ್ ಬರೆದುಕೊಂಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ನೀವೆಲ್ಲರೂ BBK11 ರಲ್ಲಿ ತೋರಿಸಿರುವ ಪ್ರತಿಕ್ರಿಯೆಗೆ ಧನ್ಯವಾದಗಳು. ಶೋ ಮತ್ತು ನನ್ನ ಮೇಲೆ ತೋರಿಸಿದ ಪ್ರೀತಿಯ ಬಗ್ಗೆ ಹಲವರು ಹೇಳುತ್ತಾರೆ. ಇದು ನಮ್ಮೊಂದಿಗೆ ಪ್ರಯಾಣಿಸಿದ 10+1 ವರ್ಷದ ಶ್ರೇಷ್ಠ ಅನುಭವವಾಗಿತ್ತು, ಮತ್ತು ಈಗ ನಾನು ನನ್ನ ಮುಂದಿನ ಹೆಜ್ಜೆಗೆ ಸಾಗುವ ಸಮಯವಾಗಿದೆ.

ಇದು BBK ಯಲ್ಲಿನ ನನ್ನ ಕೊನೆಯ ಆವೃತ್ತಿಯಾಗಲಿದೆ. ನನ್ನ ನಿರ್ಧಾರವನ್ನು ನನ್ನ ಅಭಿಮಾನಿಗಳು ಮತ್ತು ಈ ವರ್ಷಗಳಲ್ಲಿ BB ಅನ್ನು ಅನುಸರಿಸಿದ ಎಲ್ಲರೂ ಗೌರವಿಸುತ್ತಾರೆ ಎಂಬುದರಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ಈ ಆವೃತ್ತಿಯನ್ನು ಅತ್ಯುತ್ತಮವಾಗಿ ಮಾಡಲು ಪ್ರಯತ್ನಿಸೋಣ. ಎಂದು ಕಿಚ್ಚ ಸುದೀಪ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಇತ್ತೀಚೆಗೆ ಸುದೀಪ್ ಅವರು ದೊಡ್ಮನೆ ಆಟ ಸೀಸನ್ 11 ನಡೆಸಿಕೊಡಲ್ಲ ಅಂತಾ ನೇರವಾಗಿ ತಿಳಿಸಿದ್ದರು. ಆದರೆ ವಾಹಿನಿಯ, ಅಭಿಮಾನಿಗಳ ಒತ್ತಾಯಕ್ಕೆ ಸುದೀಪ್ ಸಾಥ್ ನೀಡಿದ್ದರು. ಈಗ ಮುಂದಿನ ಸೀಸನ್ ನಡೆಸಿಕೊಡಲ್ಲ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ.

Share This Article
Leave a comment