ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ (Kiccha Sudeep) ತಾಯಿ ಸರೋಜಾ ಭಾನುವಾರ ನಿಧನರಾಗಿದ್ದಾರೆ.
ಅನಾರೋಗದ್ಯದ ಹಿನ್ನೆಲೆ ಸುದೀಪ್ ತಾಯಿ ಸರೋಜಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.
ಇಂದು ಮಧ್ಯಾಹ್ನ 12 ಗಂಟೆಯ ವೇಳೆಗೆ ಕುಟುಂಬಸ್ಥರು ಪಾರ್ಥಿವ ಶರೀರವನ್ನು ಜೆಪಿ ನಗರದ ನಿವಾಸಕ್ಕೆ ತರಲಿದ್ದಾರೆ.