IPL 2025: 83 ರನ್ಗಳ ಅಂತರದಲ್ಲಿ ಗುಜರಾತ್ ಸೋಲು! ಮೊದಲ ಸ್ಥಾನ ಸೇರುವ ಅವಕಾಶ RCB ಗೆ ಇದೆಯೇ ..! | ಪಬ್ಲಿಕ್ ನ್ಯೂಸ್ 24X7 ಕನ್ನಡ

public wpadmin

IPL 2025ರ 67ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಗುಜರಾತ್ ಟೈಟನ್ಸ್ ತಂಡವನ್ನು 83 ರನ್‌ಗಳಿಂದ ಸೋಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್‌ಕೆ 231 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಗುಜರಾತ್ 147 ರನ್‌ಗಳಿಗೆ ಆಲೌಟ್ ಆಯಿತು. ಈ ಗೆಲುವಿನಿಂದ ಸಿಎಸ್‌ಕೆ ಲೀಗ್ ನಿಂದ ಹೊರಬಿದ್ದರೆ, ಗುಜರಾತ್ ತಂಡದ ಟಾಪ್ 2 ಸ್ಥಾನದ ಆಸೆಗೆ ತೊಂದರೆಯಾಗಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ 67ನೇ ಪಂದ್ಯದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಗುಜರಾತ್ ಟೈಟನ್ಸ್ ತಂಡವನ್ನು ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮಣಿಸುವಲ್ಲಿ ಯಶಸ್ವಿಯಾಗಿದೆ. ಈ ಗೆಲುವಿನೊಂದಿಗೆ ಸಿಎಸ್​ಕೆ ಲೀಗ್​ಗೆ ವಿದಾಯ ಹೇಳಿದರೆ, ಇತ್ತ ಈ ಸೋಲಿನೊಂದಿಗೆ ಗುಜರಾತ್ ತಂಡದ ಟಾಪ್ 2 ಕನಸು ಭಗ್ನಗೊಳ್ಳುವ ಹಂತಕ್ಕೆ ತಲುಪಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ 231 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್ 147 ರನ್​ಗಳಿಗೆ ಆಲೌಟ್ ಆಗುವ ಮೂಲಕ 83 ರನ್​ಗಳ ಬೃಹತ್ ಅಂತರದಿಂದ ಹೀನಾಯ ಸೋಲಿಗೆ ಕೊರಳೊಡ್ಡಿತು.

Share This Article
Leave a comment