ಬೆಂಗಳೂರು: ಅಣ್ಣನ ಮದುವೆಗಾಗಿ ಇಟ್ಟಿದ್ದ ಚಿನ್ನಾಭರಣ ಕದ್ದು ತಮ್ಮ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆದಿತ್ಯ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಇದೇ ತಿಂಗಳ 15ಕ್ಕೆ ಅಣ್ಣನ ಮದುವೆ ಫಿಕ್ಸ್ ಆಗಿತ್ತು. ಇದಕ್ಕಾಗಿ ಮನೆಯಲ್ಲಿ ಚಿನ್ನಾಭರಣ ಹಾಗೂ ಹಣ ಇಟ್ಟಿದ್ದರು. ಆದರೆ ಅದನ್ನು ಆದಿತ್ಯ ಕದ್ದು ಸಿಕ್ಕಿಬಿದ್ದಿದ್ದಾನೆ.
ಊಬರ್ ಚಾಲಕನಾಗಿದ್ದ ಆದಿತ್ಯ ವಿಪರೀತ ಆನ್ಲೈನ್ ಗೇಮ್ ಚಟಕ್ಕೆ ಬಿದ್ದಿದ್ದನು. ಮನೆಯಲ್ಲಿ ಯಾರು ಇಲ್ಲದ ವೇಳೆ ಚಿನ್ನಾಭರಣ ಕದ್ದು ಆಂಧ್ರಪ್ರದೇಶಕ್ಕೆ ಟ್ರೈನ್ ಹತ್ತಿದ್ದಾನೆ. ಇತ್ತ ಮನೆಗೆ ಬಂದ ಅಣ್ಣನಿಗೆ ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ ಮತ್ತು ಹಣ ಕಣ್ಮರೆಯಾಗಿರೋದನ್ನು ಕಂಡು ಅನುಮಾನ ಬಂದಿದೆ.
ಕೊನೆಗೆ ಪೋಷಕರು ಆದಿತ್ಯನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಬೊಮ್ಮನಹಳ್ಳಿ ಪೊಲೀಸರು ಕೂಡಲೇ ಟವರ್ ಡಂಪ್ ಲೊಕೇಷನ್ ಆಧರಿಸಿ ಆರೋಪಿ ಬಂಧಿಸಿದ್ದಾರೆ. ಬಂಧಿತನಿಂದ 7 ಲಕ್ಷ ಬೆಲೆ ಬಾಳುವ 100 ಗ್ರಾಂ ಬೆಳ್ಳಿ 102 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.