ಶಿವಮೊಗ್ಗ: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಹೊಸನಗರ ತಾಲೂಕಿನ ಚಿಕ್ಕಮಣತಿ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಅನುದೀಪ್ (16) ಎಂದು ಗುರುತಿಸಲಾಗಿದೆ. ಕಳೆದ ಅ.15 ರಂದು ಅನುದೀಪ್ ಕೀಟನಾಶಕ ಸೇವಿಸಿದ್ದ. ಆತನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆತೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು (ಮಂಗಳವಾರ) ಆತ ಮೃತಪಟ್ಟಿದ್ದಾನೆ.
ವಿದ್ಯಾರ್ಥಿಯ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.