ಕೊಲೆ ಆರೋಪಿ ಪವಿತ್ರಾಗೌಡಗೆ ಜೈಲೇ ಗತಿ – ಜಾಮೀನು ಅರ್ಜಿ ವಿಚಾರಣೆ ನ.21ಕ್ಕೆ ಮುಂದೂಡಿಕೆ

public wpadmin

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾಗೌಡ ಸೇರಿದಂತೆ ಐವರ ಜಾಮೀನು ಅರ್ಜಿ ವಿಚಾರಣೆಯನ್ನು ನ.21 ಕ್ಕೆ ಹೈಕೋರ್ಟ್ ಮುಂದೂಡಿದೆ.

ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಕೋರ್ಟ್ಗೆ ಆಗಮಿಸಿದ್ದ ಪವಿತ್ರಾಗೌಡ ತಾಯಿ, ಮಗಳಿಗೆ ಜಾಮೀನು ಸಿಗದ ಹಿನ್ನಲೆಯಲ್ಲಿ ಬೇಸರದಿಂದಲೇ ಹೊರನಡೆದರು.

ಕೊಲೆ ಪ್ರಕರಣದಲ್ಲಿ ಎ2 ಆರೋಪಿ ದರ್ಶನ್ ಜಾಮೀನು ಅರ್ಜಿಯೂ 21 ಕ್ಕೆ ವಿಚಾರಣೆಯಲ್ಲಿದೆ. ಸದ್ಯ ಮಧ್ಯಂತರ ಜಾಮೀನು ಪಡೆದು ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್ ಜಾಮೀನು ಅರ್ಜಿ ವಿಚಾರಣೆಗೆ ಎಸ್‌ಪಿಪಿ ಪ್ರಸನ್ನಕುಮಾರ್ ಮನವಿ ಮಾಡಿದರು. ಕೋರ್ಟ್ ನ.21 ರಂದು ಪವಿತ್ರಗೌಡ, ದರ್ಶನ್, ಅನುಕುಮಾರ್, ಲಕ್ಷ್ಮಣ್, ನಾಗರಾಜ್ ಜಾಮೀನು ಅರ್ಜಿ ವಿಚಾರಣೆಗೆ ನಿಗದಿಪಡಿಸಿದೆ.


Share This Article
Leave a comment