ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಕದನ (By Election) ಕುತೂಹಲಕ್ಕೆ ಇಂದು ಅಂತಿಮ ತೆರೆ ಬೀಳಲಿದ್ದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ.
ಕಳೆದ ಒಂದು ತಿಂಗಳಿನಿಂದ ಭಾರೀ ಸದ್ದು ಮಾಡಿದ್ದ, ರಾಜಕೀಯ ಕೆಸರರೆಚಾಟಕ್ಕೆ ಕಾರಣವಾಗಿದ್ದ ಮಾತಿನ ತಾಪು, ವಿವಾದಾತ್ಮಕ ಹೇಳಿಕೆಗಳಿಗೆ ಸಾಕ್ಷಿಯಾಗಿದ್ದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.ಬೆಳಗ್ಗೆ 11 ಗಂಟೆಗೆ ಗೆಲ್ಲೋದು ಯಾರು ಎನ್ನುವ ಬಗ್ಗೆ ಒಂದು ಪಿಚ್ಚರ್ ಸಿಗಲಿದೆ.
ರಾಮನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಚನ್ನಪಟ್ಟಣ (Channapatn) ಕ್ಷೇತ್ರದ ಮತಎಣಿಕೆ ನಡೆಯುತ್ತಿದ್ದರೆ ಹಾವೇರಿಯ ದೇವಗಿರಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಿಗ್ಗಾಂವಿ (Shiggaon) ಕ್ಷೇತ್ರದ ಮತ ಎಣಿಕೆ ಆರಂಭವಾಗಿದೆ. ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಡೂರು (Sandur) ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಮತಗಟ್ಟೆ ಸಮೀಕ್ಷೆಗಳು ಅವರದ್ದು ಅವರಿಗೆ ಎಂದು ಹೇಳ್ತಿದ್ದರೂ, ಇದನ್ನು ನಂಬಲು ಕಾಂಗ್ರೆಸ್ ಸಿದ್ದವಿಲ್ಲ. ನಮಗೆ ಎಕ್ಸಿಟ್‌ಪೋಲ್‌ಗಳ ಬಗ್ಗೆಯೇ ನಂಬಿಕೆ ಇಲ್ಲ. ಮೂರು ಕಡೆಯೂ ನಮ್ದೇ ಗೆಲುವು ಅಂತಿದೆ.