ರಾಂಚಿ: ಜಾರ್ಖಂಡ್‌ನ (Jharkhand) 81 ವಿಧಾನಸಭಾ ಕ್ಷೇತ್ರಗಳ ಪೈಕಿ 43 ಕ್ಷೇತಗಳಿಗೆ ಇಂದು (ನ.13) ಮತದಾನ ಆರಂಭವಾಗಿದ್ದು, ಒಟ್ಟು 683 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಇಂದು ದೇಶಾದ್ಯಂತ 11 ರಾಜ್ಯಗಳ 32 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಕೇರಳದ ವಯನಾಡ್ (Wayanad) ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯುತ್ತಿದೆ.
ಜಾರ್ಖಂಡ್‌ನ 15 ಜಿಲ್ಲೆಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಚುನಾವಣಾ ಆಯೋಗವು ರಾಜ್ಯಾದ್ಯಂತ ಒಟ್ಟು 15,344 ಮತಗಟ್ಟೆಗಳನ್ನು ಸ್ಥಾಪಿಸಿದ್ದು, 225 ಸೂಕ್ಷ್ಮ ಮತಗಟ್ಟೆಗಳು ಎಂದು ಘೋಷಿಸಿದೆ. ಭದ್ರತಾ ಸುವ್ಯವಸ್ಥೆ ಕಾಪಾಡಲು 200 ಕಂಪನಿಗಳ ಭದ್ರತಾ ಪಡೆಗಳನ್ನು ನಿಯೋಜಿಸಿದೆ. ಒಟ್ಟು 2.60 ಕೋಡಿ ಮತದಾರರ ಪೈಕಿ ಈ ಹಂತದಲ್ಲಿ 1 ಕೋಟಿ 37 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ.
ಎನ್‌ಡಿಎ ಮೈತ್ರಿಕೂಟದ ಬಿಜೆಪಿ, ಜೆಡಿ(ಯು), ಎಲ್‌ಜೆಪಿ ಮತ್ತು ಎಜೆಎಸ್ ಮತ್ತು ಇಂಡಿಯಾ ಮೈತ್ರಿಕೂಟಗಳ ಜೆಎಂಎಂ, ಕಾಂಗ್ರೆಸ್, ಆರ್‌ಜೆಡಿ ನಡುವೆ ನೇರ ಏರ್ಪಟ್ಟಿದೆ. ಮೊದಲ ಹಂತದ ಚುನವಾಣೆಯ ಪಶ್ಚಿಮದಲ್ಲಿ ಅತಿ ಹೆಚ್ಚು ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಪ್ರಮುಖ ಅಭ್ಯರ್ಥಿಗಳೆಂದರೆ ಚಂಪೈ ಸೊರೆನ್, ಮಹುವಾ ಮಜಿ, ಗೀತಾ ಕೋಡಾ, ಅಜೋಯ್ ಕುಮಾರ್, ಬನ್ನಾ ಗುಪ್ತಾ ಮತ್ತು ಸುಖರಾಮ್ ಓರಾನ್ ಸ್ಪರ್ಧಿಸುತ್ತಿದ್ದಾರೆ. ಜಗನ್ನಾಥಪುರದಲ್ಲಿ ಅತಿ ಕಡಿಮೆ ಅಭ್ಯರ್ಥಿಗಳಿದ್ದು, ಕೇವಲ ಎಂಟು ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ.
ನ.20 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, 528 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಇನ್ನೂ ನ.23 ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ.