ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಮಂದಿ ಸೇರಿ ಮರಕುಂಬಿಯ 99 ಅಪರಾಧಿಗಳಿಗೆ ಜಾಮೀನು

public wpadmin

ಧಾರವಾಡ/ಕೊಪ್ಪಳ: ಕೊಪ್ಪಳ (Koppal) ಜಿಲ್ಲೆಯ ಗಂಗಾವತಿ (Gangavati) ತಾಲೂಕಿನ ಮರಕುಂಬಿ ಗ್ರಾಮದಲ್ಲಿ ದಲಿತರು ಮತ್ತು ಸವರ್ಣೀಯರ ನಡುವೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಕೊಪ್ಪಳ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದೀಗ ಧಾರವಾಡದ (Dharwad) ಹೈಕೋರ್ಟ್ (High Court) ವಿಭಾಗೀಯ ಪೀಠ ಅಪರಾಧಿಗಳಿಗೆ ಜಾಮೀನು ನೀಡಿದೆ.

ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 98 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿತ್ತು. ಆದರೆ ಇದೀಗ 99 ಜನ ಅಪರಾಧಿಗಳ ಪೈಕಿ 98 ಜನರಿಗೆ ಧಾರವಾಡದ ಹೈಕೋರ್ಟ್ ಜಾಮೀನು ನೀಡಿದೆ. ಕೊಪ್ಪಳದ ಜಿಲ್ಲಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ 98 ಜನ ಅಪರಾಧಿಗಳು ಅ.28 ರಂದು ಧಾರವಾಡ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಕುರಿತಂತೆ ವಿಚಾರಣೆ ನಡೆಸಿದ ಇಬ್ಬರು ನ್ಯಾಯಮೂರ್ತಿಗಳಿದ್ದ ವಿಭಾಗೀಯ ಪೀಠವು 98 ಜನ ಅಪರಾಧಿಗಳಿಗೆ ಜಾಮೀನು ಮಂಜೂರು ಮಾಡಿದೆ.

ಇದಕ್ಕೆ ಸಂಬಂಧಿಸಿದಂತೆ ವಕೀಲರು ಮಾತನಾಡಿ, ಕೊಪ್ಪಳದ ಜಿಲ್ಲಾ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ತಡೆ ನೀಡಿರುವ ಧಾರವಾಡ ಹೈಕೋರ್ಟ್, ಪ್ರಕರಣದ ಎ1 ಆರೋಪಿ ಮಂಜುನಾಥ ಎಂಬುವವರನ್ನು ಹೊರತುಪಡಿಸಿ, ಉಳಿದ ಎಲ್ಲ ಅಪರಾಧಿಗಳಿಗೆ ಜಾಮೀನು ನೀಡಿದೆ. ಮಂಜುನಾಥ ಜಾಮೀನಿಗೆ ಅರ್ಜಿ ಹಾಕದೇ ಇದ್ದಿದ್ದರಿಂದ ಆತನಿಗೆ ಜಾಮೀನು ದೊರೆತಿಲ್ಲ ಎಂದು ಹೇಳಿದರು.

ಪ್ರಕರಣದ ಆರೋಪಿಗಳು ಹತ್ತು ವರ್ಷಗಳಿಂದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿಲ್ಲ. ಘಟನೆ ಹಾಗೂ ಎಫ್‌ಐಆರ್ ದಾಖಲಾದ ಸಮಯದ ವ್ಯತ್ಯಾಸ ಮತ್ತು ಆರೋಪಿಗಳ ಗುರುತು ಪತ್ತೆ ಮಾಡಿಲ್ಲ ಎಂಬ ಅಂಶಗಳನ್ನು ಹೈಕೋರ್ಟ್ ಪ್ರಮುಖವಾಗಿ ಪರಿಗಣಿಸಿದೆ. ಪ್ರತಿಯೊಬ್ಬರಿಗೂ 50 ಸಾವಿರ ರೂ. ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ನೀಡುವಂತೆ ಹೈಕೋರ್ಟ್ ಷರತ್ತು ವಿಧಿಸಿದೆ ಎಂದು ತಿಳಿಸಿದರು.

Share This Article
Leave a comment