ಟೆಸ್ಟ್​ ಮೇಲೆ ಟೆಸ್ಟ್, ಆಸ್ಪತ್ರೆಯಲ್ಲಿ ಹೇಗಿದ್ದಾರೆ ದರ್ಶನ್? ಇಂದೇ ಕೋರ್ಟ್​ಗೆ ಹೆಲ್ತ್ ರಿಪೋರ್ಟ್!

public wpadmin

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅವರು ಮೆಡಿಕಲ್ ಗ್ರೌಂಡ್ಸ್​ನಲ್ಲಿ ಮಧ್ಯಂತರ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ನಟನಿಗೆ ಕೆಂಗೇರಿ ಬಿಜಿಎಸ್ ಆಸ್ಪತ್ರೆ ಆಸ್ಪತ್ರೆಯಲ್ಲಿ ನಾಲ್ಕು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿದೆ.
ಜಾಮೀನು ನೀಡುವಾಗ ಪ್ರತೀ ವಾರದ ಮೆಡಿಕಲ್ ರಿಪೋರ್ಟ್​​ ಅನ್ನು ಸಲ್ಲಿಸಬೇಕು ಎಂದು ಹೈಕೋರ್ಟ್ ಷರತ್ತು ವಿಧಿಸಿತ್ತು. ಹೀಗಾಗಿ ಇಂದು ದರ್ಶನ್ ಪರ ವಕೀಲರು ಕೋರ್ಟ್​ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಅಕ್ಟೋಬರ್ 30ರಂದು ಮಧ್ಯಂತರ ಜಾಮೀನು ಆದೇಶ ನೀಡಿದ್ದ ನ್ಯಾಯಾಲಯ ಒಂದು ವಾರದ ಮೆಡಿಕಲ್ ರಿಪೋರ್ಟ್ ಸಲ್ಲಿಕೆಗೆ ಸೂಚಿಸಿತ್ತು. ದರ್ಶನ್ ಜಾಮೀನು ಪಡೆದು ಇಂದಿಗೆ ಒಂದು ವಾರವಾದ ಹಿನ್ನೆಲೆಯಲ್ಲಿ ಮೆಡಿಕಲ್ ರಿಪೋರ್ಟ್​ಗಳನ್ನು ಕೋರ್ಟ್​ಗೆ ಸಲ್ಲಿಕೆ ಮಾಡಬೇಕಿದೆ.

ನಟ ದರ್ಶನ್ ಕಳೆದ ನಾಲ್ಕು ದಿನಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪತ್ನಿ ವಿಜಯಲಕ್ಷ್ಮಿಯೂ ಜೊತೆಗೆ ಇದ್ದಾರೆ. ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗ್ತಾರಾ ಅಥವಾ ಆಸ್ಪತ್ರೆಯಲ್ಲಿದ್ದುಕೊಂಡೇ ಚಿಕಿತ್ಸೆ ಮುಂದುವರೆಸ್ತಾರಾ ಎಂಬುದು ಸದ್ಯದಲ್ಲೇ ಗೊತ್ತಾಗಲಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ದರ್ಶನ್​ಗಿರುವ ಸಮಸ್ಯೆಗಳ ಬಗ್ಗೆ ಅನೇಕ ರೀತಿ ಪರೀಕ್ಷೆ ನಡೆಸುತ್ತಿರುವ ವೈದ್ಯರು ವರದಿಗಾಗಿ ಕಾಯುತ್ತಿದ್ದಾರೆ.

ಇತ್ತೀಚಿನ ಬೆಳವಣಿಗೆಯನ್ನು ಗಮನಿಸಿದರೆ ನಟನಿಗೆ ಸಂಕಷ್ಟ ಎದುರಾಗಲಿದೆಯಾ ಎಂಬ ಪ್ರಶ್ನೆ ಮೂಡಿದೆ. ದರ್ಶನ್ ಜಾಮೀನು ವಿಚಾರದಲ್ಲಿ ಮೇಲ್ಮನವಿಗೆ ಅನುಮತಿ ಕೋರಿ ಗೃಹ ಇಲಾಖೆಗೆ ಕಡತ ಸಲ್ಲಿಕೆಯಾಗಿದೆ ಎನ್ನಲಾಗಿದೆ.

ಪೊಲೀಸರಿಂದ ಮೇಲ್ಮನವಿಗೆ ಸಂಬಂಧಿಸಿದ ಕಡತವನ್ನು ಗೃಹ ಇಲಾಖೆಗೆ ಸಲ್ಲಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಗೃಹ ಇಲಾಖೆ ಒಪ್ಪಿಗೆ ನೀಡಿದ ಕೂಡಲೇ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಎಲ್ಲಾ ಸಾಧ್ಯತೆ ಕಂಡು ಬಂದಿದೆ. ಕಾನೂನು‌ ತಜ್ಞರು ಈ ವಿಚಾರವಾಗಿ ಮೇಲ್ಮನವಿ ಸಲ್ಲಿಸಲು ಸೂಚಿಸಿದ್ದು ಪೊಲೀಸರು ಚುರುಕಾಗಿದ್ದಾರೆ. ಗೃಹ ಇಲಾಖೆ ಒಪ್ಪಿದ ಕೂಡಲೇ ಸುಪ್ರೀಂ ಕೋರ್ಟ್ ಮೊರೆ ಹೋಗಲಿದ್ದು, ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಪೊಲೀಸರು ಮೇಲ್ಮನವಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

Share This Article
Leave a comment