ಮುಡಾ ಹಗರಣ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

public wpadmin
Review Overview

ಬೆಂಗಳೂರು: ಮುಡಾ ಹಗರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದಲ್ಲದೇ ಕಾಂಗ್ರೆಸ್ ಪಕ್ಷದಲ್ಲಿಯೂ ಅಂತರ್ಯುದ್ಧಕ್ಕೆ ವೇದಿಕೆ ಮಾಡಿಕೊಟ್ಟಿದೆ. ಮುಡಾ ಕೇಸ್ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್‌ನಿಂದ ವ್ಯತಿರಿಕ್ತ ಆದೇಶ ಬಂದರೆ ಸಿಎಂ ಬದಲಾಗುತ್ತಾರೆಂಬ ಗುಸುಗುಸು ಚರ್ಚೆ ನಡಯುತ್ತಿದೆ. ಹೀಗಾಗಿ ಸಿಕ್ಕರೆ ಯಾಕೆ ಬಿಡಬೇಕು ಎಂದು ನಾಯಕರೆಲ್ಲಾ ಸರದಿಯಲ್ಲಿ ನಿಂತಿದ್ದಾರೆ. ಇದಕ್ಕಾಗಿ ನಾನೇ ಸೀನಿಯರ್ ಎಂಬ ಅಸ್ತ್ರ ಹೂಡುತ್ತಿದ್ದಾರೆ.
ಹೀಗೆ ಪೈಪೋಟಿಗಿಳಿದಿರುವ ಸಚಿವರೇ ಮತ್ತೊಂದೆಡೆ ಸಿಎಂಗೆ ಗೆಲುವು ಸಿಕ್ಕೇ ಸಿಗುತ್ತದೆ. ಮುಡಾ ಕೇಸ್‌ನಲ್ಲಿ ಸಿಎಂ ಪಾತ್ರವೇ ಇಲ್ಲ ಎಂದೂ ಹೇಳುತ್ತಿದ್ದಾರೆ.

ಮುಡಾ ಸಂಗ್ರಾಮ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ತನಿಖೆಗೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನಾಲ್ಕು ದಿನ ಈ ಅರ್ಜಿಯ ವಿಚಾರಣೆ ನಡೆದಿದ್ದು, ಬಹುತೇಕ ಅಂತ್ಯವಾಗಿದೆ. ಸಿಎಂ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದಾರೆ. ದೂರುದಾರರ ಪರ ವಕೀಲರು ವಾದ ಅಂತ್ಯಗೊಳಿಸಿದ್ದಾರೆ. ಇದೀಗ ಇಂದು ಮತ್ತೆ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರುತ್ತಿದ್ದು, ಸಿಎಂ ಆತಂಕ ಹೆಚ್ಚಿಸಿದೆ.

Review Overview
Share This Article
Leave a comment