ರಾಜ್ಯದ ಹಲವೆಡೆ ಇಂದು ಭಾರೀ‌ ಮಳೆ, ಯೆಲ್ಲೋ ಅಲರ್ಟ್ ಘೋಷಣೆ, ಮೈಸೂರು ಜಂಬೂಸವಾರಿಗೂ ಅಡ್ಡಿ ಸಾಧ್ಯತೆ

public wpadmin

ಬೆಂಗಳೂರು: ರಾಜ್ಯದ ಹಲವೆಡೆ ಶನಿವಾರ (ಅ.12) ಭಾರೀ‌ ಮಳೆಯಾಗುವ ಸಾಧ್ಯತೆಯಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಮೈಸೂರು ಅಲ್ಲದೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶನಿವಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಹಾಗೂ ಟಾರ್ಚ್‌ಲೈಟ್ ಪರೇಡ್‌ಗೂ ಮಳೆ ಅಡ್ಡಿಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.

ಅಲ್ಲದೆ, ಕರ್ನಾಟಕ, ತಮಿಳುನಾಡು, ಕೇರಳ, ಗೋವಾ, ಮಹಾರಾಷ್ಟ್ರ, ಅರುಣಾಚಲ ಪ್ರದೇಶ ಮತ್ತು ಗುಜರಾತ್‌ನಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮುಂದಿನ 2 ದಿನಗಳಲ್ಲಿ ಅಸ್ಸಾಂ ಮತ್ತು ಮೇಘಾಲಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 13 ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲೂ ಲಘು ಮಳೆಯಾಗಲಿದೆ.

Share This Article
Leave a comment