ಲೈಂಗಿಕ ಕಿರುಕುಳ ಆರೋಪ : ನಟ  ಮುಕೇಶ್ ಅರೆಸ್ಟ್

public wpadmin

ತಿರುವನಂತಪುರ: ಮಲಯಾಳಂ ಸಿನಿಮಾ ನಟ ಹಾಗೂ ಶಾಸಕ ಮುಕೇಶ್‌ನನ್ನು ಲೈಂಗಿಕ ಕಿರುಕುಳ ಆರೋಪದಡಿಯಲ್ಲಿ ಕೇರಳ ಪೊಲೀಸರು ಬಂಧಿಸಿದ್ದಾರೆ.

ಮಲಯಾಳಂ ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿರೋ ಜಸ್ಟಿಸ್ ಹೇಮಾ ವರದಿ ಒಬ್ಬೊಬ್ಬರ ತಲೆದಂಡಕ್ಕೆ ಕಾರಣವಾಗಿತ್ತು. ಈಗ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದೆ. ಖ್ಯಾತ ನಟ ಹಾಗೂ ರಾಜಕಾರಣಿ ಮುಕೇಶ್ ಅವರನ್ನು ಬಂಧಿಸಲಾಗಿದೆ.
ಕೊಚ್ಚಿಯ ಕೋಸ್ಟಲ್ ಪೊಲೀಸ್ ಆಫೀಸಿನಲ್ಲಿ ಮುಕೇಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಎಐಜಿ ಪೂಂಗಾಝಾಲಿ ನೇತೃತ್ವದಲ್ಲಿ ನಡೆದ ವಿಚಾರಣೆಯ ನಂತರ ಮುಕೇಶ್ ಬಂಧನವಾಗಿದೆ. ತಮ್ಮ ಮೇಲೆ ಆರೋಪ ಕೇಳಿ ಬಂದ ಕೂಡಲೇ ಮುಕೇಶ್‌ ಚಲನಚಿತ್ರ ನೀತಿ ಸಮಿತಿಗೆ ರಾಜೀನಾಮೆ ಸಲ್ಲಿಸಿದ್ದರು.

Share This Article
Leave a comment