ಹಾವೇರಿ: ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಮೇಲೆ ರೌಡಿಶೀಟರ್ ಪ್ರಕರಣ ಇದೆ ಎಂದು ಹಾವೇರಿ ಎಸ್ಪಿ ಅಂಶುಕುಮಾರ್ ಆರೋಪಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಠಾಣ್ ಮೇಲೆ ರೌಡಿಶೀಟರ್ ಪ್ರಕರಣ ಇದೆ. ಪಠಾಣ್ ನಾಮಪತ್ರಸಲ್ಲಿಸುವ ವೇಳೆ ಅಫಿಡವಿಟ್ನಲ್ಲಿ ಯಾವುದೇ ಪ್ರಕರಣ ಇಲ್ಲ ಎಂದು ಹೇಳಿದ್ದರು. ಆದರೆ ಅವರ ಮೇಲೆ ರೌಡಿಶೀಟರ್ ಪ್ರಕರಣ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿಯ ಕೂಡ ಪಠಾಣ್ ಓರ್ವ ರೌಡಿಶೀಟರ್ ಎಂದು ಕಾಂಗ್ರೆಸ್ ಟಿಕೇಟ್ ಘೋಷಣೆಯಾದ ದಿನವೇ ಆರೋಪಿಸಿದ್ದರು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಪಠಾಣ್ ಮೇಲೆ ರೌಡಿ ಶೀಟರ್ ಕೇಸ್ ಇದೆ, ವಿವಿಧ ಪ್ರಕರಣ ಇರೋದನ್ನು ಆಫಿಡಿವೇಟ್ನಲ್ಲಿ ಮುಚ್ಚಿಟ್ಟಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ಕುರಿತು ಖಾದ್ರಿ ಅವರೇ ಪಠಾಣ್ ರೌಡಿ ಎಂದು ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು.
ಇದೀಗ ಚುನಾವಣಾ ಅಫಿಡವಿಟ್ನಲ್ಲಿ ಮಾಹಿತಿ ಮರೆಮಾಚಿದ್ದಾರೆ ಎಂಬ ಆರೋಪದ ಮೇಲೆ ಕಾನೂನು ಸಮರಕ್ಕೆ ಬಸವರಾಜ್ ಬೊಮ್ಮಾಯಿ ಮುಂದಾಗಿದ್ದಾರೆ.