ಹೆತ್ತ ತಾಯಿಯನ್ನು ಮರಕ್ಕೆ ಕಟ್ಟಿ ಜೀವಂತವಾಗಿ ಸುಟ್ಟುಹಾಕಿದ ಮಕ್ಕಳು

public wpadmin

ಹೆತ್ತ ತಾಯಿಯನ್ನು ಮರಕ್ಕೆ ಕಟ್ಟಿಹಾಕಿ ಮಕ್ಕಳೇ ಸಜೀವವಾಗಿ ದಹಿಸಿರುವ ಘಟನೆ ಪಶ್ಚಿಮ ತ್ರಿಪುರಾದಲ್ಲಿ ನಡೆದಿದೆ.

62 ವರ್ಷದ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಇಬ್ಬರು ಪುತ್ರರು ಜೀವಂತವಾಗಿ ಸುಟ್ಟುಹಾಕಿದ್ದಾರೆ
.ಪುತ್ರರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದು, ಕೌಟುಂಬಿಕ ಕಲಹವೇ ಭೀಕರ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.
ಮಹಿಳೆ ಸುಮಾರು ಒಂದೂವರೆ ವರ್ಷದ ಹಿಂದೆ ಪತಿಯನ್ನು ಕಳೆದುಕೊಂಡ ನಂತರ ತನ್ನ ಇಬ್ಬರು ಗಂಡು ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಆಕೆಯ ಇನ್ನೊಬ್ಬ ಮಗ ಅಗರ್ತಲಾದಲ್ಲಿ ವಾಸಿಸುತ್ತಿದ್ದ. ಈ ಸಂಬಂಧ ಚಂಪಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a comment